ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ(Chikkaballapura): ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ನಲ್ಲಿ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವಗೌಡನನ್ನು ಪೊಲೀಸರು ಬಂಧಿಸಿ, ತಡರಾತ್ರಿ ನಗರಕ್ಕೆ ಕರೆದುಕೊಂಡು ಬರಲಾಗಿದೆ. ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ರಾಜೀವಗೌಡಗೆ ಮಂಗಳೂರಿನಲ್ಲಿ ಮೂರು ದಿನ ಆಶ್ರಯ ನೀಡಿದ ಉದ್ಯಮಿ ಮೈಕಲ್ ಎಂಬುವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಅತಿಥಿ ಗೃಹದಲ್ಲಿ ಎಎಸ್ ಪಿ ಜಗನ್ನಾಥ ರೈ, ಡಿವೈಎಸ್ಪಿ ರವಿಕುಮಾರ್, ತನಿಖಾಧಿಕಾರಿ ಇನ್ಸ್ ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಕಾಂಗ್ರೆಸ್ ಪಕ್ಷದಿಂದ ರಾಜೀವಗೌಡನನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇತನ ವಿರುದ್ಧ ನಗರದಲ್ಲಿ ಪ್ರತಿಭಟನೆ ಸಹ ನಡೆಸಲಾಗಿತ್ತು.




