ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರಲು ಸಿದ್ಧ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಹೈಕಮಾಂಡ್ ನನಗೆ ಜವಾಬ್ದಾರಿ ಕೊಟ್ಟರೆ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ ಎಂದಿದ್ದಾರೆ.
ಇನ್ನು ಯತ್ನಾಳ್ ಉಚ್ಛಾಟನೆಯ ಬಳಿಕ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅವರ ಬೆಂಬಲಿಗರು ವಿವಿಧ ಪದಾಧಿಕಾರಿಗಳ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಆಂತರಿಕ ವಿಚಾರವನ್ನು ಸಮಾಜಕ್ಕೆ ಲಿಂಕ್ ಮಾಡಲಾಗಿದ್ದು, ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ರಾಜ್ಯದ ವಿವಿಧ ಕಡೆ ಪಂಚಮಸಾಲಿ ಸಮಾಜದವರು ಶುಕ್ರವಾರ ಪ್ರತಿಭಟನೆ ಮಾಡಿದ್ದಾರೆ.