ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಲಾಗಿದೆ. ಮಾರ್ಚ್ 16ರಂದು 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಮುಂಜಾನೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅದೆ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಪಶ್ಚಿಮ ಬಂಗಾಳ, ಬಿಹಾರ, ಹರಿಯಾಣ, ಓಡಿಶಾ, ಛತ್ತೀಸಗಡ, ಅಸ್ಸಾಂ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಅಧಿಸೂಚನೆ, ಮಾರ್ಚ್ 5ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನ, ಮಾರ್ಚ್ 6ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯುವುದಕ್ಕೆ ಮಾರ್ಚ್ 9 ಕೊನೆಯ ದಿನವಾಗಿದೆ. ಮಾತದಾನ 16ರ ಮುಂಜಾನೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ.




