ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ 47 ತಜ್ಞರನ್ನೊಳಗೊಂಡ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷರಾಗಿದ್ದಾರೆ. ನಟ ರವಿಚಂದ್ರನ್, ನಟಿ ಗಿರಿಜಾ ಲೋಕೇಶ್, ಲೇಖಕಿ ಮಾಲತಿ ಪಟ್ಟಣಶೆಟ್ಟಿ, ಲೇಖಕ ಸುಬ್ಬ ಹೊಲೆಯಾರ್, ಡಾ.ಸಿ.ಆರ್ ಚಂದ್ರಶೇಖರ್, ಅಪ್ಪಗೆರೆ ತಿಮ್ಮರಾಜು, ಯಲ್ಲಪ್ಪ ರೆಡ್ಡಿ ಸಲಹಾ ಸಮಿತಿ ಸದಸ್ಯರಾಗಿದ್ದಾರೆ. 70ನೇ ವರ್ಷದ ಸಂಭ್ರಮಾಚರಣೆ ಇರುವುದರಿಂದ 70 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. 5 ಲಕ್ಷ ರೂಪಾಯಿ, 25 ಗ್ರಾಂ ಚಿನ್ನ ಇರಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗಡಿ ಅಭಿವೃದ್ಧಿ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರತಿನಿಧಿಗಳು ಪದನಿಮಿತ್ತ ಸದಸ್ಯರಿರುತ್ತಾರೆ. ಸಾಹಿತ್ಯ, ಕೃಷಿ, ಕ್ರೀಡೆ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರದ ತಜ್ಞರು ಸಮಿತಿಯಲ್ಲಿದ್ದಾರೆ.