ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪಶ್ಚಿಮ ಬಂಗಾಳದ ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ(Case) ವಿರುದ್ಧ ಇಡೀ ದೇಶ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೂ ಶನಿವಾರ ಮಧ್ಯರಾತ್ರಿ ಸಲಿಕಾನ್ ಸಿಟಿಯಲ್ಲಿ ಹೊರ ರಾಜ್ಯದ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ವೀಕೆಂಡ್ ಪಾರ್ಟಿ(Party) ಮುಗಿಸಿಕೊಂಡು ಆಟೋದಲ್ಲಿ ಹೋಗುತ್ತಿದ್ದಾಗ ಬೇರೆಡೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ.
ಹೆಚ್.ಎಆರ್.ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದಾಳೆ. ಸಧ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಎಸಿಪಿ ರಮಣ್ ಗುಪ್ತಾ ಅವರು, ಕಳೆದ ರಾತ್ರಿ 1ರಿಂದ 1.30ರ ಸುಮಾರಿಗೆ ಆಟೋದಲ್ಲಿ ಹೋಗುತ್ತಿದ್ದಾಗ ಬೇರೆ ಕಡೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ(Rape) ಎನ್ನುವ ಶಂಕೆ ಆಟೋ ಚಾಲಕನ ಮೇಲಿದೆ. ಘಟನೆ ಸಂಬಂಧ 5 ತನಿಖಾ ತಂಡಗಳನ್ನು ಮಾಡಿದ್ದು, ಆರೋಪಿ ಬಂಧನದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.