ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಅಣ್ಣಾ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಚಾಟಿ ಏಟು ಬಾರಿಸಿಕೊಂಡು, ನ್ಯಾಯ ಸಿಗುವ ತನಕ ಚಪ್ಪಲಿ ತೊಡುವುದಿಲ್ಲ ಎಂದಿದ್ದಾರೆ. ಇದೀಗ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ(Tamilaga Vettri Kazhagam) ಪಕ್ಷದ ಸಂಸ್ಥಾಪಕ ಅಧ್ಯಕ್ಷ ವಿಜಯ್ ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬೇಡಿಕೆಗಳನ್ನು ಸಲ್ಲಿಸಿದ್ದೇವೆ. ಮಹಿಳೆಯರ ಸುರಕ್ಷತೆಯನ್ನು ಖಚಿತ ಪಡಿಸಿಕೊಳ್ಳುವ ಕುರಿತು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇನ್ನು ಫಂಜಾಲ್ ಚಂಡಮಾರುತದ ಪರಿಣಾಮದಿಂದ ಹಾನಿಯಾಗಿದ್ದಕ್ಕೆ ಪರಿಹಾರದ ಹಣಕ್ಕಾಗಿ ಕೇಂದ್ರಕ್ಕೆ ಒತ್ತಾಯಿಸುವ ಕುರಿತು ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಮನವಿ ಸಲ್ಲಿಸಲಾಗಿದೆ ಎಂದು ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್.ಆನಂದ್ ಹೇಳಿದ್ದಾರೆ.