ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಜಿಲ್ಲೆಯ ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಖಾಸಗಿ ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಹಾರ, ಏನೂ ಅರಿಯದ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ಇದನ್ನು ಖಂಡಿಸಿ ಮಂಗಳವಾರ ಪಟ್ಟಣ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಸೋಮವಾರ ರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಕೃತ್ಯ ನಡೆದಿದೆಯಂತೆ. ಮನೆಯಲ್ಲಿ ಹೇಳದಂತೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಯಾರಿಗೂ ಹೇಳಿರಲಿಲ್ಲ. ಬಳಿಕ ಪಕ್ಕದ ಮನೆಯವರ ಮುಂದೆ ಇದನ್ನು ಹೇಳಿದೆ. ಅವರು ಬಾಲಕಿಯ ಕುಟುಂಬಸ್ಥರ ಗಮನಕ್ಕೆ ತಂದಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ಕುಟುಂಬಸ್ಥರು ಹಿರಿಯರೊಂದಿಗೆ ಮಾತುಕತೆ ನಡೆಸಿ ಸೋಮವಾರ ಸಂಜೆ ದೂರು ದಾಖಲಿಸಿದ್ದಾರೆ.
ಇಂದು ಈ ವಿಷಯ ಎಲ್ಲೆಡೆ ಹಬ್ಬಿದೆ. ಹೀಗಾಗಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ವಾತಾವಾರಣ ಬಿಗುವಿನಿಂದ ಕೂಡಿದೆ. ಬಿಇಒ ಸ್ಥಳೀಯ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆರೋಪಿಗೆ ಕಠಿಣ ಕಾನೂನು ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.