ಪ್ರಜಾಸ್ತ್ರ ಸುದ್ದಿ
ರಾಯಚೂರು(Raichur): ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ ಯಲ್ಲಪ್ಪ ಎನ್ನುವ ಆರೋಪಿಯನ್ನು ಬಂಧಿಸಲಾಗಿದೆ. 6ನೇ ತರಗತಿ ಓದುತ್ತಿರುವ ಬಾಲಕಿ ಮೇಲೆ ಸೋಮವಾರ ಮಧ್ಯಾಹ್ನ ಈ ಕೃತ್ಯವೆಸಗಿದ್ದಾನೆ. ಗಾರೆ ಕೆಲಸ ಮಾಡುತ್ತಿದ್ದ ಈತ ಕುಟುಂಬದಲ್ಲಿನ ಸಮಸ್ಯೆಯಿಂದ ಹೆಂಡ್ತಿ, ಮಕ್ಕಳು ಮನೆ ಬಿಟ್ಟು ಹೋಗಿದ್ದಾರೆ.
ಸೋಮವಾರ ಮಧ್ಯಾಹ್ನ ಶಾಲೆಯಲ್ಲಿ ಊಟಕ್ಕೆ ಬಿಟ್ಟ ವೇಳೆ ಅಂಗಡಿಗೆ ಬಂದಿದ್ದ ಬಾಲಕಿಗೆ ಚಾಕೋಲೇಟ್ ಕೊಡಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಘಟನೆ ವೇಳೆ ಬಾಲಕಿ ಕಿರುಚಿಕೊಂಡಿದ್ದಾಳೆ. ಆಗ ಅಲ್ಲಿಗೆ ಬಂದ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಗೆ ಹೆತ್ತವರಿಲ್ಲ. ಅಜ್ಜಿಯ ಬಳಿ ವಾಸವಾಗಿದ್ದಾಳೆ.