ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕರ್ನಾಟಕ ಜನಸೈನ್ಯ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಯುವ ಹೋರಾಟಗಾರ ರವಿಕಾಂತ ಎಸ್.ನಾಟೀಕಾರ ಅವರನ್ನು ನೇಮಕ ಮಾಡಲಾಗಿದೆ. ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ ಅವರು ನೇಮಕಪತ್ರ ನೀಡಿ ಶುಭ ಕೋರಿದ್ದಾರೆ. ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ನೇಮಕಪತ್ರ ನೀಡಿ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸಂಘಟನೆ ಹಾಗೂ ಕನ್ನಡ ನಾಡು, ನುಡಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.