ಪ್ರಜಾಸ್ತ್ರ ಸುದ್ದಿ
ಮಾಲೂರು(Malur): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪರಾಜಿತ ಅಭ್ಯರ್ಥಿ ಕೋರ್ಟ್ ಮೆಟ್ಟಿಲು ಹತ್ತಿದ ಪರಿಣಾಮ ಕೋರ್ಟ್ ಆದೇಶದಂತೆ ಮರು ಮತ ಎಣಿಕೆ ನಡೆಯುತ್ತಿದೆ. ಬಿಗಿ ಪೊಲೀಸ್ ಬಂದೋಬಸ್ತಿ ನಡುವೆ ಟಮಕದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮರು ಮತ ಎಣಿಕೆ ನಡೆಯುತ್ತಿದೆ. 14 ಟೇಬಲ್ ಗಳಲ್ಲಿ ಇವಿಎಂ ಹಾಗೂ 4 ಟೇಬಲ್ ಗಳಲ್ಲಿ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಮತ ಎಣಿಕೆ ಕೇಂದ್ರದಿಂದ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಾಧ್ಯಮಗಳಿಗೂ ನಿರ್ಬಂಧ ಹೇರಲಾಗಿದೆ. ಕೇಂದ್ರದಲ್ಲಿ ಹಾಲಿ ಶಾಸಕ ಕೆ.ವೈ ನಂಜೇಗೌಡ ಹಾಗೂ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಹಾಗೂ ಅಭ್ಯರ್ಥಿಗಳ ಏಜೆಂಟರು ಇದ್ದಾರೆ. ಮರು ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೊಡುವಂತೆ ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಫಲಿತಾಂಶ ಪ್ರಕಟವಾಗುವುದಿಲ್ಲ.




