ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ರಾಜ್ಯದಲ್ಲಿ ಕಳೆದೊಂದು ವಾರದಿಂದ ಚಳಿ ಹೆಚ್ಚಾಗಿದೆ. ತಾಪಮಾನ ಇಳಿಕೆಯಿಂದ ಮೈ ಕೊರೆಯುತ್ತಿದ್ದು, ಜನರು ಹೈರಾಣಾಗಿದ್ದಾರೆ. ಕನಿಷ್ಠ ಉಷ್ಣಾಂಶದಲ್ಲಿ ಶೇಕಡ 5ರಷ್ಟು ಇಳಿಕೆಯಾಗಿದೆ. ಹೀಗಾಗಿ ಜನರ ಗಡಗಡ ನಡುತ್ತಿದ್ದಾರೆ. ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು, ಬೀದರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಹವಾಮಾನ ಸಾಕಷ್ಟು ಬದಲಾವಣೆಯಾಗುತ್ತಿದೆ. ಇನ್ನು ಎರಡು ದಿನಗಳ ಕಾಲ ಶೀತ ಗಾಳಿ ಬೀಸಲಿದೆ. ಉತ್ತರ ದಿಕ್ಕಿನಿಂದ ದಕ್ಷಿಣ ದಿಕ್ಕಿನತ್ತ ಗಾಳಿ ಬೀಸುತ್ತಿರುವುದರಿಂದ ಈ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಹೀಗಾಗಿ ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ. ಮುಂಜಾನೆಯ ಕೆಲಸಗಳು ತಡವಾಗುತ್ತಿವೆ. ರಾತ್ರಿ ಬೇಗನೆ ಮನೆ ಸೇರುವಂತಾಗಿದೆ.