Ad imageAd image

14 ರಾಜ್ಯಗಳಲ್ಲಿ ಭರ್ಜರಿ ಮಳೆ, ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Nagesh Talawar
14 ರಾಜ್ಯಗಳಲ್ಲಿ ಭರ್ಜರಿ ಮಳೆ, ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಈ ವರ್ಷ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗ್ಲೇ ಹೇಳಿದೆ. ಅದರಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಗಾಲದ ಆರಂಭದಲ್ಲಿ ಭಾರಿ ಮಳೆಯಾಗುತ್ತಿದೆ. ಜೂನ್ 18ರ ತನಕ ದೇಶದ 14 ರಾಜ್ಯಗಳಲ್ಲಿ ವ್ಯಾಪಾಕ ಮಳೆಯಾಗಲಿದೆಯಂತೆ. ದಕ್ಷಿಣ ಭಾರತದಲ್ಲಿ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗೋವಾ, ಉತ್ತರ ಭಾರತದಲ್ಲಿ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಈಶಾನ್ಯ ಭಾಗದಲ್ಲಿ ಮಣಿಪುರ, ತ್ರಿಪುರ, ನಾಗಾಲ್ಯಾಂಡ್, ಮಿಜೋರಾಂ, ಸಿಕ್ಕಿಂ, ಅರುಣಾಚಲ ಪ್ರದೇಶ ಸೇರಿ ಅನೇಕ ಕಡೆ ಮಳೆಯಾಗಲಿದೆ.

ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗ್ಲೇ ವರುಣನ ಅಬ್ಬರ ಜೋರಾಗಿದೆ. ಮಲೆನಾಡು, ಅರೆಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಭರ್ಜರಿಯಾಗುತ್ತಿದೆ. ಧಾರವಾಡದ ನಲವಗುಂದ ತಾಲೂಕಿನ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದೆ. ವಾಯುಭಾರ ಕುಸಿತದ ಪರಿಣಾಮ ಜೋರಾಗಿ ಇರಲಿದೆಯಂತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ದಾವಣಗೆರೆ, ಹಾವೇರಿ ಭಾಗದಲ್ಲಿ ಮಧ್ಯಮ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ವಿಜಯನಗರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆಯಂತೆ. 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Share This Article