ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇತ್ತೀಚೆಗಷ್ಟೇ ನಡೆದ ರಾಜ್ಯ ಸರ್ಕಾರದ ಕೆಇಎ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ವಿವಾದದ ಸ್ವರೂಪ ಪಡೆದಿತ್ತು. ಇದೀಗ ಕೇಂದ್ರದ ರೈಲ್ವೆ ಇಲಾಖೆಯ ಪರೀಕ್ಷೆಯಲ್ಲೂ ಮಂಗಳಸೂತ್ರ ಸೇರಿದಂತೆ ಧಾರ್ಮಿಕ ಸಂಕೇತ ತೆಗೆದು ಬರಲು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಟೆಂಡ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30ರಂದು ನಡೆಯಲಿದ್ದು, ಮಂಗಳಸೂತ್ರ ಸೇರಿ ಧಾರ್ಮಿಕ ಸಂಕೇತ ತೆಗೆದು ಬರಬೇಕೆಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದರ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗಮನಕ್ಕೆ ತಂದಿದ್ದಾರೆ. ಅಭ್ಯರ್ಥಿಗಳಿಂದ ಮಂಗಳಸೂತ್ರ ಸೇರಿ ಧಾರ್ಮಿಕ ಸಂಕೇತಗಳನ್ನು ತೆಗೆಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೂ ಇದು ಎಷ್ಟರ ಮಟ್ಟಿಗೆ ಪಾಲನೆಯಾಗುತ್ತೆ ಅನ್ನೋ ಕುತೂಹಲವಿದೆ.