ಪ್ರಜಾಸ್ತ್ರ ಸುದ್ದಿ
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ದಿ ಡೆವಿಲ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ‘ಇದ್ರೆ ನೆಮ್ಮದಿಯಾಗಿ ಇರ್ಬೇಕು’ ಅನ್ನೋ ಹಾಡು ಭಾನುವಾರ ಮುಂಜಾನೆ 10.5ಕ್ಕೆ ಬಿಡುಗಡೆಯಾಗಿದೆ. ಈ ಮೂಲಕ ಅಭಿಮಾನಿಗಳಿಗೆ ಗಣೇಶ ಹಬ್ಬಕ್ಕೆ ಕಿಕ್ ಕೊಡಲಾಗಿದೆ. ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದರಿಂದ ಮತ್ತೆ ಜೈಲುಪಾಲಾಗಿದ್ದಾರೆ. ಅಲ್ಲಿಂದಲೇ ಚಿತ್ರದ ಕೆಲಸಗಳು ನಡೆಯಲಿ ಎಂದು ಎಲ್ಲರಿಗೂ ತಿಳಿಸಿದ್ದಾರೆ.
ಅನಿರುದ್ಧ್ ಶಾಸ್ತ್ರಿ ಸಾಹಿತ್ಯ, ದೀಪಕ್ ಬ್ಲೂ ಗಾಯನ ಹಾಗೂ ಬಿ.ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂತು ಮಾಸ್ಟರ್ ಕೋರಿಯೋಗ್ರಾಫಿ ಈ ಚಿತ್ರಕ್ಕಿದೆ. ಪ್ರಕಾಶ್ ವೀರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಜೆ.ಜಯಮ್ಮ ಮತ್ತು ಸರೆಗಮ ದಿ ಡೆವಿಲ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.