Ad imageAd image

ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ನಿಧನ

Nagesh Talawar
ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ನಿಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ, ಧಾರವಾಡ ರಂಗಾಯಣದ ನಿರ್ದೇಶಕ ರಾಜು(ರಾಜೇಸಾಬ್) ತಾಳಿಕೋಟಿ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 62 ವರ್ಷದ ರಾಜು ತಾಳಿಕೋಟಿಯವರು ಸಿನಿಮಾದ ಚಿತ್ರೀಕರಣವೊಂದರಲ್ಲಿ ಭಾಗವಹಿಸಿದ್ದರು. ಭಾನುವಾರ ರಾತ್ರಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.

ರಾಜು ತಾಳಿಕೋಟೆ ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯವರು. ತಾಳಿಕೋಟೆಯಲ್ಲಿನ ಖಾಸ್ಗತೇಶ್ವರ ಮಠದಲ್ಲಿದ್ದುಕೊಂಡು ಬದುಕು ಕಟ್ಟಿಕೊಂಡವರು. ವೃತ್ತಿರಂಗಭೂಮಿ ಕಲಾವಿದರಾಗಿದ್ದರು. ಮನಸಾರೆ ಚಿತ್ರದ ಮೂಲಕ ಸಿನಿಮಾಕ್ಕೆ ಬಂದರು. 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸ್ಟಾರ್ ನಟರೊಂದಿಗೆ ಅಭಿನಯಿಸಿದರು. ಹಲವಾರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದರು.

ಕಲಿಯುಗದ ಕುಡುಕ ಕ್ಯಾಸೇಟ್ ಮೂಲಕ ಒಂದು ಕಾಲದಲ್ಲಿ ಬಹುದೊಡ್ಡ ಅಲೆಯನ್ನು ಎಬ್ಬಿಸಿದವರು. ನಾಟಕಗಳ ಮೂಲಕ ರಂಜಿಸಿದರು. ಉತ್ತರ ಕರ್ನಾಟಕ ಭಾಷೆಯಲ್ಲಿಯೇ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಇವರ ನಟನಗೆ ಹಲವಾರು ಪ್ರಶಸ್ತಿಗಳು ಬಂದಿವೆ.

WhatsApp Group Join Now
Telegram Group Join Now
Share This Article