ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಪ್ರಧಾನಿ ಮೋದಿ ಶುಕ್ರವಾರ ಉಡುಪಿಗೆ ಆಗಮಿಸಿದ್ದ ವೇಳೆ ಸರ್ಕಾರದ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸಿದರು. ಈ ವೇಳೆ ಪ್ರಧಾನಿ ಕೈಗೆ ಪತ್ರವೊಂದನ್ನು ನೀಡಿದರು. ಕೆಲ ಸಮಯ ಅವರೊಂದಿಗೆ ಮಾತನಾಡಿದರು. ಮೆಕ್ಕೆಜೋಳ ಹಾಗೂ ಹೆಸರುಕಾಳಿಗೆ ಬೆಂಬಲ ಬೆಲೆ ಹೆಚ್ಚಿಗೆ ಮಾಡಬೇಕು ಅನ್ನೋ ಮನವಿಯನ್ನು ರಾಜ್ಯ ಸರ್ಕಾರದ ಪರವಾಗಿ ನೀಡಲಾಗಿದೆ.
ಮಾರುಕಟ್ಟೆ ಬೆಲೆ ಕುಸಿತದಿಂದಾಗಿ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ಹೆಚ್ಚಿಸಬೇಕು, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಬೇಕು ಅನ್ನೋ ವಿಚಾರವನ್ನು ಪ್ರಧಾನಿ ಮೋದಿಯವರ ಗಮನಕ್ಕೆ ತರಲಾಗಿದೆ.




