ಪ್ರಜಾಸ್ತ್ರ ಸುದ್ದಿ
ಬೀದರ(Bidara): ಇಲ್ಲಿನ ಸಾಯಿ ಶಾಲೆ ಮೈದಾನದಲ್ಲಿ ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ಭಾನುವಾರ ಸಂಜೆ ಆಯೋಜಿಸಿರುವ ಬೃಹತ್ ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಶ್ರೀರಾಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹೈದ್ರಾಬಾದ್ ನ ಬಿಜೆಪಿ ನಾಯಕಿ ಮಾಧವಿ ಲತಾ ಹಾಗೂ ಹಿಂದೂ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದಾರೆ.
ಈ ಮೂವರು ಭಾಷಣಕಾರರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಸಂಬಂಧ ಹಲವು ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ಸಂಜೆ ನಡೆಯುವ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಭಾರಿ ಜಿಲ್ಲಾಧಿಕಾರಿ ಡಾ.ಗಿರೀಶ್ ಬದೋಲೆ ಆದೇಶದಲ್ಲಿ ಹೇಳಿದ್ದಾರೆ.