Ad imageAd image

ಸಿಂದಗಿ: ಅಕ್ರಮವಾಗಿ ಸಾಗಿಸುತ್ತದ್ದ ಅನ್ನಭಾಗ್ಯ ಅಕ್ಕಿ ವಶ

Nagesh Talawar
ಸಿಂದಗಿ: ಅಕ್ರಮವಾಗಿ ಸಾಗಿಸುತ್ತದ್ದ ಅನ್ನಭಾಗ್ಯ ಅಕ್ಕಿ ವಶ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ರಾಜ್ಯ ಸರ್ಕಾರದ ಮಹತ್ವದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಎಪಿಎಎಂಸಿ ಆವರಣದಲ್ಲಿ ಮಂಗಳವಾರ ಸಂಜೆ ದಾಳಿ ಮಾಡಿ ಬುಲೆರೊ ಪಿಕ್ ಅಪ್ ವಾಹನದಲ್ಲಿದ್ದ 50 ಕೆಜಿ ತೂಕದ 62 ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.

ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಬಂದ ಮೇರೆಗೆ ತಾಲೂಕು ಆಹಾರ ನಿರೀಕ್ಷಕರಾದ ವಿದ್ಯಾ ಹಿಪ್ಪರಗಿ ಅವರು ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದಾಗ, ಚಾಲಕ ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಆತನನ್ನು ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದಾಗ ಆತ ತಪ್ಪಿಸಿಕೊಂಡಿದ್ದಾನೆ. ಹೀಗಾಗಿ ಆತನ ಪತ್ತೆ ಕಾರ್ಯ ನಡೆದಿದೆ. 91 ಸಾವಿರದ 60 ರೂಪಾಯಿ 31 ಕಿಂಟ್ವಾಲ್ 40 ಕೆಜಿ ಅಕ್ಕಿ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕರಾದ ವಿದ್ಯಾ ಹಿಪ್ಪರಗಿ ಅವರು ಪ್ರಕರಣ ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article