ಪ್ರಜಾಸ್ತ್ರ ಸುದ್ದಿ
ಮಂಡ್ಯ(Manday): ಐದು ದಿನ ಗಣೇಶ(Ganesh Festival) ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆಸಿದ ಘಟನೆ ಜಿಲ್ಲೆಯ ನಾಗಮಂಲದ ಬದರಿಕೊಪ್ಪಲಿನಲ್ಲಿ ನಡೆದಿದೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಕಾರಣಕ್ಕೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಸೆಪ್ಟೆಂಬರ್ 14ರ ತನಕ ನಿಷೇಧಾಜ್ಞೆ(144 section) ಜಾರಿ ಮಾಡಲಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. ಇನ್ನು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಪರಿಸ್ಥಿತಿ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಕೆಲ ದುಷ್ಕರ್ಮಿಗಳು ಗಣೇಶ ಮೆರವಣಿಗೆ ವೇಳೆ ಕಲ್ಲು(violence) ತೂರಾಟ ನಡೆಸಿದ್ದಾರೆ. ಅಲ್ಲದೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ್ದಾರೆ. ಹೀಗಾಗಿ ಪರಿಸ್ಥಿತಿ ಕೈ ಮೀರಿದೆ. ಈ ವೇಳೆ ಅಂಗಡಿಗಳ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಎರಡು ಸಮುದಾಯಕ್ಕೆ ಸೇರಿದ 28 ಆರೋಪಿಗಳನ್ನು ಬಂಧಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಯಾವುದೋ ಒಂದು ಗುಂಪನ್ನು ಓಲೈಸಿಕೊಂಡು ಹೋಗುವ ಕೆಲಸ ಮಾಡುತ್ತಿದೆ. ಹೀಗಾಗಿ ಅವರು ಇಷ್ಟೊಂದು ಉದ್ಧಟತನ ತೋರಿಸುತ್ತಿದ್ದಾರೆ. ನಾವು ಏನೇ ಮಾಡಿದರೂ ಸರ್ಕಾರ ನಮ್ಮ ರಕ್ಷಣೆಗಿದೆ ಎನ್ನುವ ಭಾವನೆ ಇದೆ. ಆದ್ದರಿಂದ ಸರ್ಕಾರ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್.ಡಿ(HDK) ಕುಮಾರಸ್ವಾಮಿ ಆಗ್ರಹಿಸಿದ್ದಾರೆ.