ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಪ್ರತಿ ಭಾರಿಯೂ ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ನಡೆಯುತ್ತೆ. ಅದೇ ರೀತಿ ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಶಿವಸೇನೆ ಹಾಗೂ ಎಂಇಎಸ್ ಪುಂಡಾಟಿಕೆ ನಡೆದಿದೆ. ಕೊಲ್ಹಾಪುರದಲ್ಲಿ ಕರ್ನಾಟಕದ ಬಸ್ಸಿನ ಮೇಲೆ ಜೈ ಮಹಾರಾಷ್ಟ್ರ ಸ್ಟಿಕರ್ ಅಂಟಿಸಿ ಪ್ರತಿಭಟನೆ ನಡೆಸಿದ್ದಾರೆ.
ಎಂಇಎಸ್ ನವರು ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಮುಂದಾಗಿದ್ದರು. ಇದಕ್ಕೆ ಜಿಲ್ಲಾಡಳಿತ ಪರವಾನಿಗೆ ನೀಡಿಲ್ಲ. ಹೀಗಾಗಿ ಕೊಲ್ಹಾಪುರದಲ್ಲಿ ಪುಂಡಾಟಿಕೆ ನಡೆಸಲಾಗಿದೆ. ಮಹಾರಾಷ್ಟ್ರದ ನಾಯಕರು ಬೆಳಗಾವಿ ಪ್ರವೇಶಿಸಲು ಯತ್ನಿಸಿದ್ದು, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಹತ್ತಿರ ಗಡಿಯಲ್ಲಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಬಂದ್ ಮಾಡಲಾಗಿದೆ.




