ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಆನ್ಲೈನ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರಿಗೆ ಇಡಿ ನೋಟಿಸ್ ನೀಡಿದ ಹಿನ್ನಲೆಯಲ್ಲಿ ಸೋಮವಾರ ಅಧಿಕಾರಿಗಳನ್ನು ಭೇಟಿಯಾದರು. ದೆಹಲಿಯಲ್ಲಿರುವ ಇಡಿ ಕೇಂದ್ರ ಕಚೇರಿಗೆ ವಕೀಲರೊಂದಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾದರು.
ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಸುರೇಶ್ ರೈನ್, ಶಿಖರ್ ಧವನ್ ಅವರನ್ನು ಈಗಾಗ್ಲೇ ವಿಚಾರಣೆ ನಡೆಸಲಾಗಿದೆ. ಬಾಲಿವುಡ್ ಹಾಗೂ ಸೌಥ್ ಸಿನಿ ದುನಿಯಾದ ಹಲವು ನಟ, ನಟಿಯರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ.