ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ರಾಜ್ಯದಲ್ಲಿ ರೌಡಿಶೀಟರ್ ಗಳ ಸರಣಿ ಹತ್ಯೆಗಳು ನಡೆಯುತ್ತಿವೆ. ಮಂಗಳೂರು, ರಾಮನಗರ ಬಳಿಕ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ರೌಡಿಶೀಟರ್ ಹತ್ಯೆಯಾಗಿದೆ. ತಾಲೂಕಿನ ವರುಣಾ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕ್ಯಾತಮಾರನಹಳ್ಳಿಯ ಕಾರ್ತಿಕ್(33) ಎಂಬಾತನನ್ನು ಕೊಲೆ ಮಾಡಲಾಗಿದೆ. ಕೆ.ಆರ್ ಆಸ್ಪತ್ರೆಗೆ ಮೃತದೇಹ ಸಾಗಿಸಲಾಗಿದೆ. ಹಳೇ ವೈಷಮ್ಯದ ಕಾರಣಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ರಾಜ್ಯದಲ್ಲಿ ಹೀಗೆ ಒಂದೊಂದು ಜಿಲ್ಲೆಯಲ್ಲಿ ಹತ್ಯೆಗಳು ನಡೆಯುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಒಂದು ಕಡೆ ಕೊಲೆಗಳು, ಅನುಮಾನ, ಕುಟುಂಬ ಕಲಹ ಸೇರಿದಂತೆ ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆಗಳು ಆಗುತ್ತಿವೆ. ಇದರಿಂದಾಗಿ ಜನರು ನೆಮ್ಮದಿಯಿಂದ ಇರಲು ಹೇಗೆ ಸಾಧ್ಯವೆಂದು ಕೇಳುತ್ತಿದ್ದಾರೆ.