ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಕಳೆದೊಂದು ವರ್ಷದಿಂದ ಕಾನೂನು ಸಮರ ನಡೆಯುತ್ತಿದೆ. ಇಬ್ಬರು ಉನ್ನತ ಅಧಿಕಾರಿಗಳ ನಡುವಿನ ಫೈಟ್ ಸುಪ್ರೀಂ ಕೋರ್ಟ್ ತನಕ ಹೋಗಿ ಬಂದಿದೆ. ಹಿರಿಯ ಅಧಿಕಾರಿಗಳು ಹೀಗೆ ಕಿತ್ತಾಡುವುದು ಸರಿಯಲ್ಲ. ರಾಜಿ ಮಾಡಿಕೊಳ್ಳಿ ಎಂದು ಸಲಹೆ ನೀಡಿತ್ತು. ಆದರೆ, ಡಿ.ರೂಪಾ ಬೇಷರತ್ ಕಮ್ಷೆ ಆಚಿಸಬೇಕು. ಇಲ್ಲದಿದ್ದರೆ ಕೋರ್ಟ್ ನಲ್ಲಿ ಬಗೆಹರಿಯಲಿ ಎಂದು ರೋಹಿಣಿ ಸಿಂಧೂರಿ ಹೇಳಿದ್ದರು. ಇದರಿಂದಾಗಿ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಅರ್ಜಿಯನ್ನು ವಾಪಸ್ ಕಳಿಸಿತು.
ಈಗ ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ನಲ್ಲಿ ಡಿ.ರೂಪಾ ಮಾನನಷ್ಟ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಹೀಗಾಗಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಫೆಬ್ರವರಿ 19, 2023ರಲ್ಲಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ನೀಡಿದ ಹೇಳಿಕೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮಾಧ್ಯಮಗಳಲ್ಲಿ ವ್ಯಾಪಕ ವರದಿಯಾಗಿದೆ. ಅವರ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್ 1.8 ಲಕ್ಷ ಜನರು ನೋಡಿದ್ದಾರೆ. ಅಲ್ಲದೇ ಸರ್ಕಾರ ನನಗೆ 6 ತಿಂಗಳ ಕಾಲ ಜಾಗ ತೋರಿಸದೆ ವರ್ಗಾವಣೆ ಮಾಡಿತ್ತು. ಇದರಿಂದ ಸಾಕಷ್ಟು ನೊಂದಿದ್ದೇನೆ ಎಂದು ಪ್ರಕರಣ ದಾಖಲಿಸಿದ್ದಾರೆ.