ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಅಲ್ಪಸಂಖ್ಯಾತರ ಬ್ಲಾಕ್ ಘಟಕದ ತಾಲೂಕಾಧ್ಯಕ್ಷರಾಗಿ ಸಲೀಮ್‌ಪಟೇಲ್ ಮರ್ತೂರ ಅವರನ್ನು ಆಯ್ಕೆ ಮಾಡಲಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ ಅವರ ಅನುಮೋದನೆ ಮೇರೆಗೆ ಸಲೀಮ್ ಪಟೇಲ್ ಮರ್ತೂರ ಅವರನ್ನು ತಾಲೂಕ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಿಸಿ ಜಿಲ್ಲಾಧ್ಯಕ್ಷ ಶಕೀಲ್ ಅಹ್ಮದ ಬಾಗಮಾರೆ ಅವರು ಆದೇಶ ಹೊರಡಿಸಿದ್ದಾರೆ.
ಶಾಸಕ ಅಶೋಕ ಮನಗೂಳಿ ಅವರ ಆದೇಶದ ಮೇರೆಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸಮಾಜದ ಹಿರಿಯ ಹಾಗೂ ಯುವಕರನ್ನು ಭೇಟಿ ನೀಡಿ ಪಕ್ಷ ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಅವರಿಗೆ ತಿಳಿಸುತ್ತೇನೆ. ಶಾಸಕರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಅವರ ವಹಿಸಿದ ಜವಾಬ್ದಾರಿಯನ್ನು ಅಚ್ಚು ಕಟ್ಟಾಗಿ ನಿಭಾಯಿಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೂತನ ಅಧ್ಯಕ್ಷ ಸಲೀಮ್‌ಪಟೇಲ್ ಮರ್ತೂರ ಮಾಧ್ಯಮ ಪ್ರಕಟಣೆಲ್ಲಿ ತಿಳಿಸಿದ್ದಾರೆ.