ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಬುಧವಾರ ಮುಂಜಾನೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸನೈನ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಜೆಡಿಯು ನಾಯಕ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಆ ಸ್ಥಾನಕ್ಕೆ ಬಿಜೆಪಿಯ ಸಾಮ್ರಾಟ್ ಚೌಧರಿ ಬಂದಿದ್ದಾರೆ. ಆರ್ ಜೆಡಿ ಮೂಲಕ ರಾಜಕೀಯ ಜೀವನ ಆರಂಭಿಸಿದ ಇವರು ಜೆಡಿಯು, ಹಿಂದೂಸ್ಥಾನ್ ಆವಾಮ್ ಮೋರ್ಚಾ ಸಹ ಸೇರಿದ್ದರು. 2018ರಲ್ಲಿ ಬಿಜೆಪಿ ಸೇರ್ಪಡೆಯಾದರು. 2023ರಲ್ಲಿ ಬಿಹಾರ ಬಿಜೆಪಿ ಘಟಕದ ಅಧ್ಯಕ್ಷರಾದರು. 2024ರಲ್ಲಿ ಉಪ ಮುಖ್ಯಮಂತ್ರಿಯಾದರು. ಹೀಗಾಗಿ ಸಿಎಂ ಸ್ಥಾನ ಅಲಂಕರಿಸಿದ್ದಾರೆ.




