Ad imageAd image

ಸಂಘ ಪರಿವಾರ ಭಾರತದ ಬಹುತ್ವ ವಿರೋಧಿ: ಸಿಎಂ ಸಿದ್ದರಾಮಯ್ಯ

Nagesh Talawar
ಸಂಘ ಪರಿವಾರ ಭಾರತದ ಬಹುತ್ವ ವಿರೋಧಿ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಯುವ ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿಸಿದ್ದ ಯುವ ಕ್ರಾಂತಿ ಕಾರ್ಯಕರ್ತರ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು.

ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ.

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು. ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ ಎಂದು ಹೇಳಿದರು.

WhatsApp Group Join Now
Telegram Group Join Now
Share This Article