ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಡಿ.ವೈ ಚಂದ್ರಚೂಡ್ ಅವರ ನಿವೃತ್ತಿ ಬಳಿಕ ಇಂದು ಸಂಜೀವ್ ಖನ್ನಾ ಅವರು 51ನೇ ಮುಖ್ಯನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿದರು.
ಸಿಜೆಐ ಸಂಜೀವ್ ಖನ್ನಾ ಅವರ ಅಧಿಕಾರವಾಧಿ ಮೇ 13, 2025ರ ತನಕ ಇರಲಿದೆ. ಖನ್ನಾ ಅವರು ಕುಟುಂಬಸ್ಥರೆಲ್ಲ ನ್ಯಾಯಾಂಗ ಇಲಾಖೆಯಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ತಂದೆ ದೇವರಾಜ್ ಖನ್ನಾ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ಚಿಕ್ಕಪ್ಪ ಎಚ್.ಆರ್. ಖನ್ನಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಹಾದಿಯಲ್ಲಿ ಸಾಗಿದ ಸಂಜೀವ್ ಖನ್ನಾ ಅವರು ಇಂದು ಸುಪ್ರೀಂ ಕೋರ್ಟ್ ಸಿಜೆಐ ಎನ್ನುವ ಅತ್ಯುನ್ನತ ಸ್ಥಾನ ಅಲಂಕರಿಸಿದ್ದಾರೆ.