ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಹೈಕೋರ್ಟ್ ನೀಡಿರುವ ಆದೇಶದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಈ ಬಗ್ಗೆ ಬುಧವಾರ ಮಾತನಾಡಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್(former Lokayukta justice santosh hegde) ಹೆಗ್ಡೆ ಅವರು, ಈ ಹಿಂದೆ ಲಾಲ್ ಬಹದ್ದೂರ್ ಶಾಸ್ತ್ರಿಯವರು ರೈಲ್ವೆ ಅಪಘಾತವಾದಾಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಇದೆ ರೀತಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದು ಉತ್ತಮ. ನೀಡಲೇಬೇಕು ಎನ್ನುವ ಕಾನೂನು ಇಲ್ಲ ಎಂದಿದ್ದಾರೆ.
ಹೈಕೋರ್ಟ್ ಸಹ ಮೇಲ್ನೋಟಕ್ಕೆ ತಪ್ಪು ನಡೆದಿರುವುದಕ್ಕೆ ಪುರಾವೆ ಇದೆ ಎಂದು ಹೇಳಿದೆ. ಗಂಭೀರ ಸ್ವರೂಪದ ಆರೋಪ ಇರುವುದರಿಂದ ಅವರ ಮೇಲಿನ ನಂಬಿಕೆ ಉಳಿಯಬೇಕು ಅಂದರೆ ರಾಜೀನಾಮೆ ನೀಡಬೇಕಾಗುತ್ತೆ. ನಿರಾಪರಾಧಿ ಎಂದು ಸಾಬೀತಾದರೆ ಮತ್ತೆ ಸಿಎಂ ಸ್ಥಾನ ಅಲಂಕರಿಸಲಿ ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.