ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡದ ಖ್ಯಾತ ನಟಿ, ಅಭಿನೇತ್ರಿ ಬಿ.ಸರೋಜಾದೇವಿ ನಿಧನರಾಗಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ಕನ್ನಡದ ಮೊದಲ ಸೂಪರ್ ಸ್ಟಾರ್ ಎಂದು ಖ್ಯಾತಿ ಗಳಿಸಿದ್ದರು. ಇವರ ನಿಧನ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣದಲ್ಲಿ ಬರಹದ ಮೂಲಕ ಸಂತಾಪ ಸೂಚಿಸಿದ್ದಾರೆ. ಬಹುಭಾಷಾ ನಟಿಯಾದ ಬಿ.ಸರೋಜಾ ಅವರು 200 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 17ನೇ ವಯಸ್ಸಿನಲ್ಲಿಯೇ ಸಿನಿ ರಂಗಕ್ಕೆ ಬಂದ ಇವರು, ಕನ್ನಡದ ಮೊದಲ ಮಹಿಳಾ ಸೂಪರ್ ಸ್ಟಾರ್ ಎಂದು ಖ್ಯಾತಿ ಗಳಿಸಿದರು.
ಇವರ ನಟನೆಗೆ 1969ರಲ್ಲಿ ಪದ್ಮಶ್ರೀ, 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದರು. ಇದರ ಜೊತೆಗೆ ಬೆಂಗಳೂರಿನ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ತಮಿಳುನಾಡಿನ ಕಲೈಮಾಮಣಿ ಪ್ರಶಸ್ತಿ ಪಡೆದಿದ್ದಾರೆ. ಒಂದು ಕಾಲದಲ್ಲಿ ಅತ್ಯಂತ ಯಶಸ್ವಿ ನಟಿಯಾಗಿ ಮಿಂಚಿದವರು.