ಪ್ರಜಾಸ್ತ್ರ ಸುದ್ದಿ
ಇಂಡಿ(Indi): ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ.ಶಶಿಕಾಂತ ಹವಳಗಿಗೆ, ರಾಜಸ್ಥಾನದ ಸನ್ ರೈಸ ವಿಶ್ವವಿದ್ಯಾಲಯದ ಡಾ.ವಿಶಾಲ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧನ ಮಂಡಿಸಿದ್ದಾರೆ. ‘ಮಾನವ ಹಕ್ಕುಗಳು ತಮ್ಮ ಅಂತರರಾಷ್ಟ್ರೀಯ ಸಂಬಂಧಗಳ ಅನುಷ್ಠಾನ ಮತ್ತು ಜಾರಿಯಲ್ಲಿನ ಸವಾಲುಗಳ’ ಎನ್ನುವ ವಿಷಯಕ್ಕೆ ಸಂಬಂಧಿಸಿದ ಮಹಾಪ್ರಬಂಧವನ್ನು ಸಾದರ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಜನವರಿ 13, 2025ರಂದು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ. ಇದಕ್ಕೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.