Ad imageAd image

ಪರಿಶಿಷ್ಟ ಜಾತಿ ಒಳಮೀಸಲಾತಿ: ಇಂದು ಸದನದಲ್ಲಿ ಹೇಳುವ ಸಾಧ್ಯತೆ

Nagesh Talawar
ಪರಿಶಿಷ್ಟ ಜಾತಿ ಒಳಮೀಸಲಾತಿ: ಇಂದು ಸದನದಲ್ಲಿ ಹೇಳುವ ಸಾಧ್ಯತೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಸಂಬಂಧ ಮಂಗಳವಾರ ತಡರಾತ್ರಿಯವರೆಗೂ ಸಚಿವ ಸಂಪುಟ ಸಭೆ ನಡೆದಿದೆ. ಬಲಗೈ ಜಾತಿಗಳಿಗೆ ಶೇಕಡ 6, ಎಡಗೈ ಜಾತಿಗಳಿಗೆ ಶೇಕಡ 6 ಹಾಗೂ ಸ್ಪೃಶ್ಯ ಅಲೆಮಾರಿ ಜಾತಿಗಳಿಗೆ ಶೇಕಡ 5ರಷ್ಟು ಮೀಸಲಾತಿ ನೀಡುವ ಕುರಿತು ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಈ ಬಗ್ಗೆ ಅಧಿವೇಶನದಲ್ಲಿ ಹೇಳುವ ಸಾಧ್ಯತೆಯಿದೆ.

101 ಪರಿಶಿಷ್ಟ ಜಾತಿಗಳಲ್ಲಿ ಮೂರು ಭಾಗಗಳಾಗಿ ಮಾಡಲಾಗಿದೆ. ಶೇಕಡ 17ರಷ್ಟು ಮೀಸಲಾತಿಯನ್ನು ವರ್ಗೀಕರಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆಯಂತೆ. ನಮಗೂ ಸಮಾನ ಮೀಸಲಾತಿ ನೀಡಬೇಕು ಎಂದು ಬಲಗೈ ಸಮುದಾಯದ ಸಚಿವರಾದ ಜಿ.ಪರಮೇಶ್ವರ, ಎಚ್.ಸಿ ಮಹಾದೇವಪ್ಪ ಹೇಳಿದ್ದಾರಂತೆ. ಭೋವಿ ಸಮುದಾಯಕ್ಕೆ ಮೀಸಲಾತಿಯನ್ನು ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರಂತೆ. ಇನ್ನು ಆಯೋಗದ ವರದಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಿದ್ಧಪಡಿಸಿರುವ ಟಿಪ್ಪಣಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ವಿವರಿಸಿದರಂತೆ.

WhatsApp Group Join Now
Telegram Group Join Now
Share This Article