ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಬೆಂಗಳೂರು ಟೌನ್ ಮತ್ತು ರೂರಲ್ ಪ್ಲಾನಿಂಗ್ ಅಧಿಕಾರಿ ಮಾರುತಿ ಬಗಲಿ ಎಂಬುವರಿಗೆ ಸೇರಿರುವ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿ 3 ಕಡೆ ಆಸ್ತಿ ಮಾಡಿರುವ ಆರೋಪದ ಹಿನ್ನಲೆಯಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇವರು ಬರೀ ಬಳ್ಳಾರಿ ಮಾತ್ರವಲ್ಲ, ರಾಜ್ಯದ ಬೇರೆ ಬೇರೆ ಕಡೆ ಆಸ್ತಿ ಮಾಡಿರುವ ಆರೋಪವೂ ಕೇಳಿ ಬಂದಿದೆ.