ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದ್ವಿತೀಯ ಪಿಯುಸಿ ಫಲಿತಾಂಶ ಏಫ್ರಿಲ್ 9 ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರ ತನಕ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.
ಕರ್ನಾಟಕ ಒನ್ ಆ್ಯಪ್ ಮೂಲಕ ಅಥವ https://karresults.nic.in ನಲ್ಲಿ ಫಲಿತಾಂಶ ನೋಡಬಹುದು. ಇನ್ನು ವಿದ್ಯಾರ್ಥಿಗಳು ನೋಂದಾಯಿತ ಮೊಬೈಲ್ ಸಂಖ್ಯೆಗೂ ಎಸ್ಎಂಎಸ್, ವಾಟ್ಸಪ್ ಮೂಲಕ ಫಲಿತಾಂಶ ಬರಲಿದೆ. ಡಿಜಿಲಾಕರ್ ಮೂಲಕ ಅಂಕಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಕಳಿಸಲಾಗುವುದು ತಿಳಿಸಲಾಗಿದೆ.




