ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20ರವರೆಗೆ ಜಿಲ್ಲೆಯ 63 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಹೀಗಾಗಿ ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ.