ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಕಲಬುರ್ಗಿಯ ಶ್ರೀ ವಿ.ಜಿ.ಮಹಿಳಾ ಕಾಲೇಜು ಜನವರಿ 13ರಂದು ಆಯೋಜಿಸಿದ್ದ ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಕಾಲೇಜಿನ ವಿದ್ಯಾರ್ಥಿಗಳಾದ ಜಯಶ್ರೀ ಕೂಚಬಾಳ ಹಾಗೂ ಸಮೃದ್ಧಿ ಕೋಟ್ಯಾಳ ವಿಶ್ವವಿದ್ಯಾಲಯ ಬ್ಲ್ಯೂ ಆಗಿ ಆಯ್ಕೆ ಆಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.




