ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಕಾಂಗ್ರೆಸ್ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(94) ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೃತಪಟ್ಟಿದ್ದಾರೆ. ದೇಶದ ಹಿರಿಯ ಶಾಸಕ ಸಹ ಆಗಿದ್ದರು.
1964ರಲ್ಲಿ ರಾಜಕೀಯಕ್ಕೆ ಬಂದರು. 1994ರಲ್ಲಿ ಮೊದಲ ಬಾರಿಗೆ ಶಾಸಕರಾದರು. ಆಗ ಅವರ ವಯಸ್ಸು 63. ಮುಂದೆ ಶಾಸಕರಾಗಿ, ಸಂಸದರಾಗಿ ಆಯ್ಕೆ ಆದರು. ಸಚಿವರಾಗಿಯೂ ಕೆಲಸ ಮಾಡಿದರು. ಇವರ ಪುತ್ರ ಮಲ್ಲಿಕಾರ್ಜುನ ಪ್ರಸ್ತುತ ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದಾರೆ. ಇವರ ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ ಸಂಸದೆಯಾಗಿದ್ದಾರೆ. ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಹೊಂದಿದ್ದಾರೆ.
6 ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿದ್ದರು. ಸಚಿವರಾಗಿಯೂ ಕೆಲಸ ಮಾಡಿದರು. ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘವಾಗಿ ಕೆಲಸ ಮಾಡಿದರು. ಇವರ ನಿಧನಕ್ಕೆ ರಾಜಕೀಯ ಗಣ್ಯರು ಸೇರಿದಂತೆ ಎಲ್ಲ ಪಕ್ಷದ ನಾಯಕರು, ಸಮಾಜದ ಮುಖಂಡರು ಸಂತಾಪ ಸೂಚಿಸಿದ್ದಾರೆ.




