ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಿರಿಯ ಪತ್ರಕರ್ತ, ಅಂಕಣಗಾರ, ಲೇಖಕ ಟಿಜೆಎಸ್ ಜಾರ್ಜ್(97) ಅವರು ಶುಕ್ರವಾರ ನಿಧನರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರಹದ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
ಅವರ ಹರಿತವಾದ ಲೇಖನಿ, ರಾಜಿಮಾಡಿಕೊಳ್ಳದ ಧ್ವನಿ ಮೂಲಕ 6 ದಶಕಗಳ ಕಾಲ ಭಾರತೀಯ ಪತ್ರಿಕೋದ್ಯಮವನ್ನು ಶ್ರೀಮಂತಗೊಳಿಸಿದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ. ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಸುಮಾರು 25 ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.