ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಾಡಿನ ಹಿರಿಯ ಸಾಹಿತಿ ಜಿ.ಎಸ್ ಸಿದ್ದಲಿಂಗಯ್ಯ(94) ಅವರು ವಯೋಸಹಜದಿಂದಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಚಾಮರಾಜಪೇಟೆ ಲಿಂಗಾಯತ ರುದ್ರಭೂಮಿಯಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕವಿಯಾಗಿ, ವಿಮರ್ಶಕರಾಗಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಕಾಲೇಜು ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ.