ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಕಳೆದ 15 ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಾಗಿದ್ದು, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಆರೋಗ್ಯ ಇಲಾಖೆ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳದೆ ಇರುವುದು ಇಷ್ಟಕ್ಕೆಲ್ಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳು ಹಾಗೂ ತಜ್ಞ ವೈದ್ಯರ ಸಭೆಯನ್ನು ಶನಿವಾರ ಕರೆಯಲಾಗಿದೆ.
ಸಂಜೆ 4.30ರ ಸುಮಾರಿಗೆ ಗೃಹ ಕೃಷ್ಣದಲ್ಲಿ ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಭೆ ಆಯೋಜಿಸಲಾಗಿದೆ. ಇನ್ನು ಸರಣಿ ಬಾಣಂತಿಯರ ಸಾವಿಗೆ ಗ್ಲುಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣವೆಂದು ಹೇಳಲಾಗುತ್ತಿದೆ. ಸೇರಿಯನ್ ವೇಳೆ ಐವಿ ಗ್ಲುಕೋಸ್ ನಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ತನಿಖಾ ಸಂಸ್ಥೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನುಡಾ.ಸವಿತಾ, ಡಾ.ಭಾಸ್ಕರ್ ಹಾಗೂ ಡಾ.ಹರ್ಷ ಅವರ ನೇತೃತ್ವದ ಸಮಿತಿ ರಚಿಸಿದ್ದು, ಬಿಮ್ಸ್ ಗೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ.