ಪ್ರಜಾಸ್ತ್ರ ಸುದ್ದಿ
ಬ್ರಸ್ಬೇನ್(Brisbane): ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸೀಸ್ ನಡುವಿನ 5 ಟಿ-20 ಪಂದ್ಯಗಳ ಸರಣಿಯನ್ನು ಭಾರತ 2-1ರಿಂದ ತನ್ನದಾಗಿಸಿಕೊಂಡಿದೆ. ಅಂತಿಮ ಪಂದ್ಯ ಮಳೆಯಿಂದ ರದ್ದಾದ ಹಿನ್ನಲೆಯಲ್ಲಿ ಭಾರತ ಸರಣಿಯನ್ನು ವಶಪಡಿಸಿಕೊಂಡಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಟೀಂ ಇಂಡಿಯಾ ಬ್ಯಾಟಿಂಗ್ ಶುರು ಮಾಡಿತು. 4.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ರನ್ ಗಳಿಸಿತು. ಶುಭಮನ್ ಗಿಲ್, ಅಭಿಷೇಕ್ ಶರ್ಮಾ ಉತ್ತಮವಾಗಿ ಆಡುತ್ತಿದ್ದರು. ಈ ವೇಳೆ ಮಳೆ ಪ್ರಾರಂಭವಾಯಿತು. ತುಂಬಾ ಸಮಯವಾದರೂ ಮಳೆ ನಿಲ್ಲದ ಕಾರಣ ಅಂಪೈರ್ ಗಳು ಪಂದ್ಯ ರದ್ದು ಮಾಡಲು ನಿರ್ಧರಿಸಿದರು. ಭಾರತ ತಂಡದ ಅಭಿಷೇಕ್ ಶರ್ಮಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.




