Ad imageAd image

ಚಂದನವನದಲ್ಲಿ ಲೈಂಗಿಕ ದೌರ್ಜನ್ಯ: ಸೆ.16ರಂದು ಸಭೆ

ಕಲಾವಿದೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಕದ ಮಲಯಾಳಂ ಸಿನಿಮಾ ರಂಗದಲ್ಲಿ ನ್ಯಾ.ಹೇಮಾ ವರದಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ.

Nagesh Talawar
ಚಂದನವನದಲ್ಲಿ ಲೈಂಗಿಕ ದೌರ್ಜನ್ಯ: ಸೆ.16ರಂದು ಸಭೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಲಾವಿದೆಯರ ಮೇಲೆ ಲೈಂಗಿಕ(Sexual assalut) ದೌರ್ಜನ್ಯವೆಸಗಲಾಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಕದ ಮಲಯಾಳಂ ಸಿನಿಮಾ ರಂಗದಲ್ಲಿ ನ್ಯಾ.ಹೇಮಾ ವರದಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಇದೆ ರೀತಿ ಕನ್ನಡ ಚಿತ್ರರಂಗದಲ್ಲಿಯೂ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಫೈರ್ ಎನ್ನುವ ಸಂಸ್ಥೆ ಸಿಎಂಗೆ ಮನವಿ ಸಲ್ಲಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ(karnataka film chamber of commerce) ಮಂಡಳಿಯಲ್ಲಿ ಸಭೆ ಕರೆಯಲಾಗಿದೆ.

ಚಿತ್ರರಂಗದಲ್ಲಿ ಎಲ್ಲರನ್ನೂ ಒಟ್ಟಾಗಿ ಸೇರಿಸಿ ಸಭೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಸೂಚನೆ ನೀಡಿದೆ. ಸೆಪ್ಟೆಂಬರ್ 13ರೊಳಗೆ ಸಭೆ ಕರೆದು ಚರ್ಚಿಸಿ. ಸಮಿತಿ ರಚನೆಗೆ ಒತ್ತಾಯಿಸುವಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಹೇಳಿದೆ. ಈ ಕುರಿತು ಆಂತರಿಕ ಸಭೆ ನಡೆಸಿರುವ ಮಂಡಳಿ, ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಅನೇಕ ಕಲಾವಿದರು ಲಭ್ಯವಿಲ್ಲ. ಹೀಗಾಗಿ ಸೆಪ್ಟೆಂಬರ್ 16ಕ್ಕೆ ಸಭೆ ಕರೆಯಲಾಗಿದೆ ಎಂದಿದ್ದಾರೆ. ಈ ಹಿಂದೆ ಮೀಟೂ ಪ್ರಕರಣ ನಡೆದಾಗಲೂ ಮಂಡಳಿ ಕರ್ತವ್ಯ ನಿಭಾಯಿಸಿದೆ. ಪಾರ್ವತಮ್ಮ ರಾಜಕುಮಾರ್ ಅವರ ನೇತೃತ್ವದಲ್ಲಿ ಈ ಹಿಂದೆ ಸಮಿತಿಯಿತ್ತು. ಅದೇ ರೀತಿ ರಚಿಸಲು ಸಿದ್ಧ ಎನ್ನುವ ಮಾತುಗಳನ್ನು ಮಂಡಳಿಯ ಪದಾಧಿಕಾರಿಗಳು ಹೇಳುತ್ತಿದ್ದಾರೆ.

WhatsApp Group Join Now
Telegram Group Join Now
Share This Article