Ad imageAd image

ಸಂಜೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Nagesh Talawar
ಸಂಜೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ನಗರದ ಹೈಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಒ ಸೇರಿ ಹಿರಿಯ ಅಧಿಕಾರಿಗಳು ಇದನ್ನು ನೋಡಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸೇರಿದಂತೆ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆ ಇರುವುದರಿಂದ ವಿವಿಧ ಜಿಲ್ಲೆಗಳ ಎಸ್ಪಿಗಳು, ಎಎಸ್ಪಿಗಳು, ಸಿಪಿಐ, ಪಿಎಸ್ಐ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಮೈದಾನ ಸೇರಿ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಇಂದು ದಾವಣಗೆರೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಲ್ಲಿನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿಯ ಸಮಾಧಿಯ ಪಕ್ಕದಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

WhatsApp Group Join Now
Telegram Group Join Now
Share This Article