Ad imageAd image

ವೀರ ವನಿತೆ ಒನಕೆ ಓಬವ್ವಳ ಧೈರ್ಯ ಅಳವಡಿಸಿಕೊಳ್ಳಬೇಕು: ಶಂಕರ ಮಾರಿಹಾಳ

ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ವೀರ ವನಿತೆ ಒನಕೆ ಓಬವ್ವ ಅವರ ದೈರ್ಯ, ಸಾಹಸ ಹಾಗೂ ಸಮಯ ಪ್ರಜ್ಞೆಯಂತಹ ಆದರ್ಶಮಯ ವಿಚಾರಗಳನ್ನು

Nagesh Talawar
ವೀರ ವನಿತೆ ಒನಕೆ ಓಬವ್ವಳ ಧೈರ್ಯ ಅಳವಡಿಸಿಕೊಳ್ಳಬೇಕು: ಶಂಕರ ಮಾರಿಹಾಳ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ವೀರ ವನಿತೆ ಒನಕೆ ಓಬವ್ವ ಅವರ ದೈರ್ಯ, ಸಾಹಸ ಹಾಗೂ ಸಮಯ ಪ್ರಜ್ಞೆಯಂತಹ ಆದರ್ಶಮಯ ವಿಚಾರಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಅವರು ಹೇಳಿದರು. ಸೋಮವಾರ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋಟೆ ರಕ್ಷಣೆಗಾಗಿ ತೋರಿದ ಧೈರ್ಯ ಇವರ ಸಾಹಸಮಯ ಚರಿತ್ರೆ ಯುವಪೀಳಿಗೆ ಅರಿಯಬೆಕು. ಇಂತಹ ಮಹನೀಯರ ಜಯಂತಿಗಳು ಆಚರಿಸುವ ಮೂಲಕ ಅವರ ಸಾಹಸಮಯ ಸಾಧನೆ ಸಮಾಜಕ್ಕೆ ತಿಳಿಹೇಳುವ ಉದ್ಧೇಶವಾಗಿದೆ ಎಂದು ಅವರು ಹೇಳಿದರು. ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ ಅವರು ಮಾತನಾಡಿ, ಶತ್ರು ಸೈನ್ಯವನ್ನು ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆಯಾಗಿದ್ದರು. ಒನಕೆ ಓಬವ್ವ  ಅವರ ದೈರ್ಯ, ಸಾಹಸ, ದಿಟ್ಟತನದ ಆದರ್ಶ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು ಎಂದರು. ಡಾ. ಸುಜಾತಾ ಚಲವಾದಿ ಅವರು ಒನಕೆ ಓಬವ್ವ ಕುರಿತು ಉಪನ್ಯಾಸ ನೀಡಿದರು. ಸುನೀಲ್ ಉಕ್ಕಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನವರಸ ನೃತ್ಯ ಕಲಾ ತಂಡದಿಂದ ನೃತ್ಯ ರೂಪಕ ಪ್ರಸ್ತುತಪಡಿಸಲಾಯಿತು.  ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ವೀರ ವನಿತೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆಗೆ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರಶಾಂತ ಚನಗೊಂಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ ಕಾರ್ಯದರ್ಶಿ ಅನುಸೂಯಾ ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿಗಳಾದ ಸುರೇಶ ಹೊಸಮನಿ, ಜಿ.ಎಮ್ ಕೋಲೂರ, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳಾದ ಅಡಿವೆಪ್ಪ ಸಾಲಗಲ್ಲ, ಅಭಿಷೇಕ ಚಕ್ರವರ್ತಿ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಸೇರಿದಂತೆ ಇತರರು ಉಪಸ್ಥಿತರಿದ್ದರು. ನೀಡಿದರು.

WhatsApp Group Join Now
Telegram Group Join Now
Share This Article