ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬದಲಾವಣೆ ಸಂಬಂಧ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಟೀಂ ಪ್ರಯತ್ನ ನಡೆಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಆಪ್ತ ವಲಯದವರು ವಿಜಯೇಂದ್ರ ಬೆನ್ನಿಗೆ ನಿಂತಿದ್ದಾರೆ. ಇದರ ನಡುವೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಹಿಡಿದು ರಾಜ್ಯಾಧ್ಯಕ್ಷ ಸ್ಥಾನದ ತನಕ ಚುನಾವಣೆ ನಡೆಸಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿಗೆ ವಿಜಯೇಂದ್ರಗೂ ಟೆನ್ಷನ್ ಶುರುವಾಗಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಚೌಹಾಣ್, ರಾಜ್ಯಾಧ್ಯಕ್ಷರ ಆಯ್ಕೆಗೆ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೊಂದಿಗೆ ಚರ್ಚಿಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಚುನಾವಣೆ ಪ್ರಕ್ರಿಯೆ ನಡೆಯಲಿವೆ ಎಂದಿದ್ದಾರೆ. ಅಲ್ಲಿಗೆ ವಿಜಯೇಂದ್ರರನ್ನು ಕಳಗೆ ಇಳಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.