ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಕೊರತೆ ಉಂಟಾದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಹೋಟೆಲ್, ರೆಸ್ಟೋರೆಂಟ್, ಕೆಟರಿಂಗ್ ಗಳಿಗೆ ಸಮಸ್ಯೆಯಾಗಿದ್ದು, ಬಂದ್ ಮಾಡುವ ಸ್ಥಿತಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.
ಎಲ್ ಪಿಜಿಯನ್ನು ಕೇವಲ ಗೃಹ ಬಳಕೆದಾರರಿಗೆ ಮಾತ್ರ ಮಾರಾಟ ಮಾಡಬೇಕೆಂದು ಆದೇಶಿಸಲಾಗಿದೆ. ಈ ಮೂಲಕ ಮನೆಗಳಿಗೆ ಸಮಸ್ಯೆಯಾಗದಂತೆ ಗ್ಯಾಸ್ ಪೂರೈಕೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ. ಆದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆಯಿಂದ ಹಲವು ಸಮಸ್ಯೆಗಳಾಗುತ್ತಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಸಮಸ್ಯೆಯಿಂದ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ಲಕ್ಷಾಂತರ ಜನರು ಅವಲಂಬಿತರಾಗಿದ್ದು, ಅವರಿಗೆಲ್ಲ ತೊಂದರೆಯಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಾಣಿಜ್ಯ ಬಳಕೆಯ ಸಿಲಿಂಡರ್ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಕೆ ಮಾಡುವುದನ್ನು ಖಚಿತಪಡಿಸಬೇಕು ಎಂದು ತಿಳಿಸಿದ್ದಾರೆ.




