ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ(Devara Hipparagi): ಪಟ್ಟಣದ ಜಡಿಮಠದ ಆಭರಣದಲ್ಲಿ ನಡೆದ ಕಾರ್ತಿಕ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸ್ವಾಮೀಜಿ, ಕಾರ್ತಿಕ ಮಾಸ ಅತ್ಯಂತ ಶ್ರೇಷ್ಠವಾಗಿದ್ದು ಈ ಕಾರಣಕ್ಕೆ ಎಲ್ಲಾ ದೇವಾಲಯಗಳಲ್ಲಿ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವುದೇ ದೀಪೋತ್ಸವ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸಂಭ್ರಮದಿಂದ ದೀಪ ಬೆಳಗಿಸಿದರು. ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರಿಗೆ ಶ್ರೀಗಳು ಹಾಗೂ ಪಟ್ಟಣದ ಪ್ರಮುಖರು, ಗಣ್ಯರು ಸನ್ಮಾನಿಸಿದರು. ದೇವರಹಿಪ್ಪರಗಿ ತಾಲೂಕಿನಲ್ಲಿ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರು ಹಲವಾರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತಾಲೂಕಿನ ಸರ್ವತೋಮುಖ ಪ್ರಗತಿಗೆ ಪೂರಕ ವರದಿಗಳನ್ನು ಮಾಡುವ ಮೂಲಕ ಜನಮಾನಸದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚು ಪ್ರಶಸ್ತಿಗಳು ಅರಸಿ ಬರಲಿ ಎಂದು ಶುಭ ಹಾರೈಸಿದರು.




