ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಒಂದು ವೇಳೆ ಅವರು ಜೈಲಿಗೆ ಹೋದರೆ, ನಾನು ಸೇರಿದಂತೆ ಒಂದು ಕೋಟಿ ಜನರು ಜೈಲಿಗೆ ಹೋಗುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್(Vatal Nagaraj) ಹೇಳಿದ್ದಾರೆ. ಭಾನುವಾರ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೂರಾರು ನಾಗರಹಾವುಗಳ ಮಧ್ಯೆ ಇದ್ದಾರೆ. ಸ್ವಪಕ್ಷದವರೆ ಹಿತಶತ್ರುಗಳಾಗಿದ್ದಾರೆ ಎಂದು ಕಿಡಿ ಕಾರಿದರು.
ಯಾವುದೇ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಬಾರದು. ಒಂದು ವೇಳೆ ಜೈಲಿಗೆ ಹೋದರೆ ಅಲ್ಲಿಂದ ಅಧಿಕಾರ ಮಾಡಬೇಕು. ಸಿಎಂ ಸ್ಥಾನಕ್ಕೆ ಯಾವುದೇ ಡೆಡ್ ಲೈನ್ ಇಲ್ಲ. ಮೊದಲು ಕಾಂಗ್ರೆಸ್ ಪಕ್ಷದವರು ಬಾಯಿ ಮುಚ್ಚಿಕೊಂಡು ಇರಬೇಕು. ವಿಪಕ್ಷದವರು ಮೊದಲು ಅವರ ಮನೆಯನ್ನು ಅವರು ನೋಡಿಕೊಳ್ಳಲಿ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.