ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಹೇಳಿಕೆಗಳನ್ನೇ ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ಬಳಸುತ್ತಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ ಆರೋಪಿಸಿದರು. ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಈಗೀಗ ಪಾಕಿಸ್ತಾನದಲ್ಲಿಯೂ ಜನಪ್ರಿಯರಾಗುತ್ತಿದ್ದಾರೆ ಎಂದು ಟಾಂಟ್ ನೀಡಿದರು.
ಅಸಹಾಯಕ ಸ್ಥಿತಿಯಲ್ಲಿರುವ ಕಾಂಗ್ರೆಸ್ಸಿಗೆ ಕರ್ನಾಟಕ ಎಟಿಎಂ ಆಗಿದೆ. ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಕುರ್ಚಿ ಪಡೆಯಲು ಗಳಿಸಲು ಡಿ.ಕೆ ಶಿವಕುಮಾರ್ ಹಣ ಕೊಡುತ್ತಿದ್ದಾರೆ. ಕಾಂಗ್ರೆಸ್ ಆಡಳಿತಕ್ಕೆ ಬಂದು ವರ್ಷ ಆಗಿರುವುದು ಕರಾಳ ದಿನ ಎಂದು ವಾಗ್ದಾಳಿ ನಡೆಸಿದರು.