ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ(MUDA) ವಿರುದ್ಧದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ನೀಡಿದ್ದ ತನಿಖೆಗೆ ಅನುಮತಿ ರದ್ದು ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ(B.Y Vijayendra) ವಿಜಯೇಂದ್ರ, ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ಸಲ್ಲಿಸಬೇಕು ಎಂದರು. ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಹೇಳಿದೆ. ಹೀಗಾಗಿ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದರು.
ಕಾಂಗ್ರೆಸ್(Congress) ನವರು ರಾಜ್ಯಪಾಲರನ್ನು ರಾಜಭವನನ್ನು ಕೇಂದ್ರದ ಏಜೆಂಟ್ ಎಂದರು. ವಾಲ್ಮೀಕಿ(Valmiki Nigama) ನಿಗಮದ ಹಗರಣದ ಬಗ್ಗೆ ನಿರಂತರ ಹೋರಾಟ ಮಾಡಿದೇವು. ಸಿಎಂ ಕುಟುಂಬ ಭಾಗಿಯಾಗಿರುವ ಮುಡಾ ಹಗರಣದ ಬಗ್ಗೆ ಹೋರಾಟ ಮಾಡಿದೇವು. ಇದರಲ್ಲಿ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಿದ್ದರು. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇವೆ ಎಂದು ಸಿಎಂ ಮೇಲೆಯೇ ಕಳಂಕ ಬಂದಿದೆ. ಕೂಡಲೇ ಅವರು ರಾಜೀನಾಮೆ ಸಲ್ಲಿಸಬೇಕು. ಹೈಕೋರ್ಟ್ ಆದೇಶದ ಮೂಲಕ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಅಂತಾ ಹೇಳಿದರು.