Ad imageAd image

ಒತ್ತಡದ ಬದುಕಿಗೆ ಕ್ರೀಡೆ, ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ: ಮೇಯರ್ ಸಿದ್ರಾಮಪ್ಪ ಕರಡಿ

Nagesh Talawar
ಒತ್ತಡದ ಬದುಕಿಗೆ ಕ್ರೀಡೆ, ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ: ಮೇಯರ್ ಸಿದ್ರಾಮಪ್ಪ ಕರಡಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಒತ್ತಡದ  ಜೀವನ ಶೈಲಿಯಲ್ಲಿ ಕ್ರೀಡೆ ಅತ್ಯಮೂಲ್ಯ ಸಾಧನ. ಸದೃಢ ಆರೋಗ್ಯ ಹೊಂದಿ ಕ್ರೀಯಾಶೀಲತೆ ಮೈಗೂಡಿಸಿಕೊಂಡು ನೆಮ್ಮದಿ ಹಾಗೂ ಉಲ್ಲಸಿತವಾಗಿರಲು ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಳ್ಳುವುದು ಅಗತ್ಯವಾಗಿದೆ ಎಂದು ಮೇಯರ್ ಸಿದ್ರಾಮಪ್ಪ ಕರಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ಪ್ರತಿದಿನ ಚೈತನ್ಯದಿಂದರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ದೈನಂದಿನ ಬದುಕಿನ ಜೀವನ ಶೈಲಿಯಾಗಿಸಿ ಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲವು ಸಾಮಾನ್ಯವಾಗಿದ್ದು, ಭಾಗವಹಿಸುವಿಕೆ ಅತಿಮುಖ್ಯವಾಗಿರುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಔದ್ರಾಮ  ಮಾತನಾಡಿ,  ಒತ್ತಡ ಜೀವನ ಶೈಲಿಯಲ್ಲಿ ಕ್ರೀಡೆ ನಮ್ಮ  ಆರೋಗ್ಯ ಹಾಗೂ ಆಲೋಚನಾ ಮಟ್ಟ ಹೆಚ್ಚಿಸುವಲ್ಲಿ ಹಾಗೂ ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಲು ಸಮರ್ಪಣೆ ಹಾಗೂ ತಾಳ್ಮೆಯ ಮೌಲ್ಯ ಕಲಿಸಿಕೊಡುವಲ್ಲಿ ಆಟೋಟಗಳ ಪಾತ್ರ ಬಹುಮುಖ್ಯವಾಗಿದೆ ಅಂತಾ ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಅಡಿವೆಪ್ಪ ಸಲಾಗಲ್, ಜಾವೀದ್ ಜಮಾದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article